ನಮ್ಮ ಬಗ್ಗೆ

 

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ಸ್ವಾಗತ

ನಮ್ಮ ಇಲಾಖೆಯು ಪ್ರಸಕ್ತ ಬೆಂಗಳೂರಿನ ವಿಕಾಸಸೌಧದ ನೆಲಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಾನ್ಯ ಆಹಾರ ಸಚಿವರು ಆಹಾರ ಇಲಾಖೆಯ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದಾರೆ. ಕಾರ್ಯದರ್ಶಿಯವರು ಇಲಾಖೆಯ ಮುಖ್ಯಸ್ಥರಾಗಿರುತ್ತಾರೆ. ಈ ಇಲಾಖೆಯಲ್ಲಿ ಒಬ್ಬರು ಉಪಕಾರ್ಯದರ್ಶಿ, ಇಬ್ಬರು ಅಧೀನ ಕಾರ್ಯದರ್ಶಿಗಳು, ಶಾಖಾಧಿಕಾರಿಗಳು ಮತ್ತು ಸಿ ಮತ್ತು ಡಿ ವರ್ಗದ ನೌಕರರುಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಈ ಕೆಳಕಂಡ ಕ್ಷೇತ್ರೀಯ ಇಲಾಖೆಗಳ ಆಡಳಿತಾತ್ಮಕ, ಆರ್ಥಿಕ ಹಾಗೂ ಸೇವೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಯೋಜನಾಬದ್ಧವಾಗಿ ನಿರ್ವಹಿಸಲಾಗುತ್ತಿದೆ.

  1. ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ.
  2. ಕಾನೂನು ಮಾಪನಶಾಸ್ತ್ರ ಇಲಾಖೆ
  3. ಕರ್ನಾಟಕ ಆಹಾರ ನಾಗರಿಕ ಮತ್ತು ಗ್ರಾಹಕರ ನಿಗಮ ನಿಯಮಿತ
  4. ಕರ್ನಾಟಕ ರಾಜ್ಯ ಗ್ರಾಹಕ ಪರಿಹಾರ ಆಯೋಗ.

    

ಇತ್ತೀಚಿನ ನವೀಕರಣ​ : 08-08-2019 11:43 AM ಅನುಮೋದಕರು: JYOTHI RJ


>